ಬ್ರಹ್ಮಾವರ: ಯುವ ಸ್ಯಾಕ್ಸೋಫೋನ್ ವಾದಕಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ನಮೃತ ದೇವಾಡಿಗ (22) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ನಮೃತಾ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಣಿಪಾಲದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.


