ಕಾಂಗ್ರೆಸ್ ನಾಯಕ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿ.ದೇವರಾಜ ಅರಸು ಅವರ ಮೊಮ್ಮಗ ಆದ ಸೂರಜ್ ಹೆಗ್ಡೆ ಭಾನುವಾರ ರಾತ್ರಿ ಹಠಾತ್ ಹೃದಯಸ್ತಂಭನದಿಂದ ಸಾವಿಗೀಡಾಗಿದ್ದಾರೆ.
Sponsoredಭಾನುವಾರ ಸೂರಜ್ (55) ಅವರಿಗೆ ಹಠಾತ್ ಹೃದಯ ಸಮಸ್ಯೆ ಕಾಣಿಸಿದ್ದು, ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದು ಬಂದಿದೆ.
ಸೂರಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.
ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು.… pic.twitter.com/ngvs4PZZJQ
— DK Shivakumar (@DKShivakumar) June 7, 2026




