ಭಾನುವಾರ, 25 ಅಕ್ಟೋಬರ್ 2026

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ನೌಕರ ಸಾವು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ನಡೆದಿದೆ.

Sponsored

ಎಚ್‌ ಕುಬೇಂದ್ರ ಕುಮಾರ್‌ (43) ಮೃತ ವ್ಯಕ್ತಿ. ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದು, ಕುಟುಂಬದ ಆಧಾರಸ್ತಂಭವಾಗಿದ್ದ ವ್ಯಕ್ತಿಯ ದಿಢೀರ್‌ ಸಾವು ಎಲ್ಲರನ್ನೂ ಶಾಕ್‌ಗೆ ದೂಡಲ್ಪಟ್ಟಿದೆ.

Marriage AdMarriage AdSponsored

ಎಂದಿನಂತೆ ತಮ್ಮ ಕೆಲಸ ಮುಗಿಸಿ ಮನೆಗೆ ಬಂದಿದ್ದ ಕುಬೇಂದ್ರ ಕುಮಾರ್‌ ಅವರು ಒಳಗಿನಿಂದ ಬಾಗಿಲು ಹಾಕಿದ್ದು, ಈ ವೇಳೆ ಪಕ್ಕದ ಮನೆಯವರು ಹೊರಗೆ ಹೋಗುವ ಸಂದರ್ಭದಲ್ಲಿ ಕುಬೇಂದ್ರ ಅವರ ಮನೆಯ ಕಿಟಕಿ ಮೂಲಕ ನೋಡಿದಾಗ ಫ್ಯಾನ್‌ಗೆ ನೇಣು ಹಾಕಿರುವುದು ಕಂಡು ಬಂದಿದೆ. ಆತಂಕಗೊಂಡ ನೆರೆಹೊರೆಯವರು ಕೂಡಲೇ ಹೂವಿನಹಡಗಲಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಮೃತ ಕುಬೇಂದ್ರ ಕುಮಾರ್‌ ಅವರು ಕಳೆದ ಮೂರು ವರ್ಷಗಳಿಂದ ಹೊಳಗುಂದಿ ಹಾಗೂ ಭಾವಿಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಮೇಲ್ವಿಚಾರಕರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣವೇನು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇನ್ನೂ ತಿಳಿದು ಬಂದಿಲ್ಲ. ಧರ್ಮಸ್ಥಳ ಸಂಘದ ಇತರ ಸಿಬ್ಬಂದಿ ಹಾಗೂ ಮೇಲಾಧಿಕಾರಿಗಳ ನಿರಂತರ ಮಾನಸಿಕ ಕಿರುಕುಳ ಮತ್ತು ಕೆಲಸದ ಒತ್ತಡವೇ ಕುಬೇಂದ್ರ ಅವರ ಸಾವಿಗೆ ಕಾರಣ ಎಂದು ಮೃತನ ಕುಟುಂಬದವರ ಆರೋಪ.

ಹೂವಿನಹಡಗಲಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.