ಶನಿವಾರ, 24 ಅಕ್ಟೋಬರ್ 2026

ಜಮ್ಮು ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ

ಜಮ್ಮು ಕಾಶ್ಮೀರದಲ್ಲಿ ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಮುಂದುವರಿಯಲಿದ್ದು, ಗಡಿ ಜಿಲ್ಲೆಗಳಾದ ಪೂಂಚ್‌ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ.

ಈ ದುರ್ಘಟನೆಯಲ್ಲಿ ಒಟ್ಟು 11 ಜನರು ಬಲಿಯಾಗಿದ್ದು ಹಲವು ಜನರು ನಾಪತ್ತೆಯಾಗಿದ್ದಾರೆ. ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ನಾಪತ್ತೆಯಾದವರ ಹುಡುಕಾಟ ಮತ್ತು ಸಿಲುಕಿರುವ ನಿವಾಸಿಗಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.