ಬೆಂಗಳೂರಿನ ಇಂದಿರಾನಗರದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತುನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪ್ರೇರಣ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಅವರು ಕಳೆದ ಒಂದು ವರ್ಷದ ಹಿಂದಷ್ಟೇ ವಿನಯ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದರು. ಪತಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದು, ಪ್ರೇರಣ ಸದ್ಯ ಬಿಎಸ್ಸಿ ಪದವಿ ಓದುತ್ತಿದ್ದರು. ಪತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಮಾವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


