ಭಾನುವಾರ, 25 ಅಕ್ಟೋಬರ್ 2026
Trending

ಖ್ಯಾತ ಸಂಗೀತ ನಿರ್ದೇಶಕ ʼಕಲೈಮಾಮಣಿʼ ದೇವಾ ಇನ್ನಿಲ್ಲ

ಖ್ಯಾತ ಸಂಗೀತ ನಿರ್ದೇಶಕ ದೇವಾ (75) ಶನಿವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾಳೆ.

Sponsored

ದೇವನೇಶನ್‌ ಚೊಕ್ಕಲಿಂಗಂ ಎಂಬ ಮೂಲ ಹೆಸರಿನ ಇವರು ʼದೇವಾʼ ಎಂದೇ ಹೆಸರು ಗಳಿಸಿದ್ದರು. ತಮಿಳು ಮಾತ್ರವಲ್ಲದೆ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. 400 ಕ್ಕೂ ಅಧಿಕ ಚಿತ್ರಗಳಿಗೆ ಹಾಡುಗಳು, ಹಿನ್ನೆಲೆ ಸಂಗೀತ ನೀಡಿದ್ದಾರೆ.

ಕನ್ನಡದ ʼಅಮೃತವರ್ಷಿಣಿʼ ಚಿತ್ರದ ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ಫಿಲ್ಮ್‌ಫೇರ್‌ ಪ್ರಶಸ್ತಿಯನ್ನು ಪಡೆದಿದ್ದರು.