ಮಂಗಳವಾರ, 27 ಅಕ್ಟೋಬರ್ 2026
Trending

Bengaluru : ಅಡುಗೆ ಮಾಡುವ ವಿಚಾರಕ್ಕೆ ಅತ್ತೆ, ಸೊಸೆ ನಡುವೆ ಜಗಳ – ಇಂಜಿನಿಯರ್ ಸೊಸೆ ಆತ್ಮಹ*ತ್ಯೆ

Bengaluru : ಹೆಚ್ಚಿನ ಮನೆಗಳಲ್ಲಿ ಅತ್ತೆ ಸೊಸೆಯಂದಿರು ಅನ್ಯೋನ್ಯವಾಗಿರುವುದು ತೀರ ವಿರಳ. ಒಂದಲ್ಲ ಒಂದು ವಿಚಾರಕ್ಕೆ ಇಬ್ಬರೂ ಕಿತ್ತಾಡುತ್ತಲೇ ಇರುತ್ತಾರೆ. ಪ್ರತ್ಯಕ್ಷವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಆದರೂ ಇದು ನಡೆಯುತ್ತಿರುತ್ತದೆ. ಇದೀಗ ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಸೊಸೆ ಇಬ್ಬರು ಗಲಾಟೆ ಮಾಡಿಕೊಂಡು, ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Sponsored

ಮೃತ ಮಹಿಳೆ ಸುಶ್ಮಾ (35) ಅವರು Dell Technologies ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಅವರನ್ನು ವಿವಾಹವಾಗಿ ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ. ಮನೆಯಲ್ಲಿ ಸಣ್ಣಪುಟ್ಟ ವಿಷಯಗಳ ಕುರಿತು ಆಗಾಗ್ಗೆ ಕಲಹಗಳು ನಡೆಯುತ್ತಿದ್ದವು ಎನ್ನಲಾಗಿದೆ. ಮಂಗಳವಾರ ಅತ್ತೆ ಕಲ್ಪನಾ ಅವರೊಂದಿಗೆ ಅಡುಗೆ ವಿಚಾರವಾಗಿ ವಾಗ್ವಾದ ಉಂಟಾಗಿತ್ತು. ಸುಶ್ಮಾ ಅವರ ಕುಟುಂಬದವರ ಆರೋಪದಂತೆ, ಅತ್ತೆ ಪದೇಪದೇ ಅಡುಗೆ ಮತ್ತು ಇತರೆ ವಿಷಯಗಳಲ್ಲಿ ಕಿರುಕುಳ ನೀಡುತ್ತಿದ್ದರೆಂದು ತಿಳಿದುಬಂದಿದೆ. ಈ ಪರಿಸ್ಥಿತಿಯಿಂದ ಮಾನಸಿಕವಾಗಿ ನೊಂದ ಸುಶ್ಮಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

Advertisement
Advertisement

ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವರದಕ್ಷಿಣೆ ಕಿರುಕುಳದ ಆರೋಪದ ಮೇರೆಗೆ ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಅತ್ತೆ ಕಲ್ಪನಾ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Advertisement