ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಇಂದು (ಭಾನುವಾರ) ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಶೀಶ್ ಅವರ ನಿವಾಸದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ.
ಟಿಎಂಸಿ ಕಚೇರಿ ರಾಂಪುರ್ಹತ್ ನಗರದ ಬ್ಯಾನರ್ಜಿ ಅವರ ನಿವಾಸದ ಸಮೀಪವೇ ಇದ್ದಿದ್ದು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ.
ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
74 ವರ್ಷದ ಆಶಿಶ್ ಬ್ಯಾನರ್ಜಿ ಟಿಎಂಸಿಯ ಹಿರಿಯ ನಾಯಕರಾಗಿದ್ದರು. 2021 ರ ಜುಲೈನಿಂದ 2026 ರ ಮೇ ವರೆಗೆ ಪಶ್ಚಿಮ ಬಂಗಾಳ ವಿಧಾನಸಭೆಯ 13ನೇ ಉಪಸಭಾಪತಿಯಾಗಿ ಸೇವೆ ಸಲ್ಲಿಸಿದ್ದರು. ಇವರು ರಾಜ್ಯದ ಶಿಕ್ಷಣ ಮತ್ತು ಕೃಷಿ ಸಚಿವರಾಗಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಡಿಯಲ್ಲಿ ಸೇವೆ ಸಲ್ಲಿಸಿದ್ದರು.
Birbhum, West Bengal: Former TMC MLA Ashish Banerjee's dead body was found in his office at his residence in Rampurhat. His body has been sent for postmortem. Further details are awaited pic.twitter.com/XoQPTgxR3l
— IANS (@ians_india) August 16, 2026


