143
ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.


ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಕಡವೆ ಏಕಾಏಕಿ ಅಡ್ಡ ಬಂದು ಕಾರಿಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.