Home Death Kaginele: ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Kaginele: ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Hindu neighbor gifts plot of land

Hindu neighbour gifts land to Muslim journalist

 Kaginele: ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ (Kaginele) ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ.

 ಸ್ವಾಮೀಜಿ (Siddaramananda Swamiji) ಇದೇ ಜ.12, 13, 14 ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ (Halumatha) ಪೂಜಾರಿಗಳ ಶಿಬಿರ ಅದ್ದೂರಿಯಾಗಿ ನಡೆದಿತ್ತು. 

ಕಳೆದ ಒಂದು ವಾರದಿಂದ ಸರಿಯಾಗಿ ಊಟ, ನಿದ್ದೆ ಮಾಡದೇ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರಿಂದ ಬುಧವಾರ ರಾತ್ರಿ ಲೋ ಬಿಪಿಯಿಂದ ಸ್ವಾಮೀಜಿ ಬಳಲಿದ್ದರು. ಕೂಡಲೇ ಅವರನ್ನು ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.