ಮಂಗಳವಾರ, 27 ಅಕ್ಟೋಬರ್ 2026
Trending

ಕಾರವಾರ: ಬಂದರಿನಲ್ಲಿ ದುರಂತ: ಬೋಟ್‌ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ತದಡಿ ಬಂದರಿನಲ್ಲಿ ಮೀನುಗಾರಿಕಾ ಬೋಟ್‌ನೊಳಗೆ ಉಸಿರುಗಟ್ಟಿ ಮೂವರು ಮೀನುಗಾರರು ಮೃತಪಟ್ಟಿದ್ದು, ಇನ್ನೋರ್ವ ಮೀನುಗಾರನ ಸ್ಥಿತಿ ಗಂಭೀರವಾಗಿದೆ. ಮೀನು ಸಂಗ್ರಹ ಮಾಡಿಟ್ಟಿದ್ದ ಸ್ಥಳವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

Sponsored

ಮೃತರನ್ನು ಕಾರ್ಮಿಕರಾದ ನೌಶಾದ್‌ (48), ಅಮೀನ್‌ (40), ಅಮನ್‌ (26) ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡ ಅಬ್ದುಲ್‌ ಯಾಕೂಬ್‌ ದಾಡಿಯಾ (60) ಅವರನ್ನು ರಕ್ಷಣೆ ಮಾಡಿ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.

Advertisement
Advertisement

ಮೀನುಗಳ ತೀವ್ರ ವಾಸನೆ ಅಥವಾ ಮುಚ್ಚಿದ ಸ್ಥಳದಲ್ಲಿ ಸಂಗ್ರಹವಾಗಿದ್ದ ಅನಿಲಗಳಿಂದ ಉಸಿರಾಟಕ್ಕೆ ತೊಂದರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪರಿಣಾಮ ಮೂವರು ಸಾವಿಗೀಡಾಗಿದ್ದು, ಒಬ್ಬರು ಅಸ್ವಸ್ಥಗೊಂಡಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.

ಗೋಕರ್ಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Advertisement