ಸೋಮವಾರ, 26 ಅಕ್ಟೋಬರ್ 2026
Trending

ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ಆತ್ಮಹತ್ಯೆ-ಡೆತ್‌ನೋಟ್‌ ಪತ್ತೆ

ಮಂಗಳೂರು ಸೆ.25: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಾಹಣಾಧಿಕಾರಿ ಕಟ್‌ಬೆಲ್ತೂರು ನಿವಾಸಿ ರಾಘವೇಂದ್ರ ಜೋಗಿ (48) ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಮೃತರ ಸಹೋದರ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ಮನೆ ಪರಿಶೀಲನೆ ಸಂದರ್ಭದಲ್ಲಿ ಡೆತ್‌ನೋಟ್‌ ದೊರಕಿದ್ದು, ʼತನ್ನ ಸಾವಿಗೆ ತಾನೇ ಕಾರಣʼ ಎಂದು ಬರೆದಿಡಲಾಗಿದೆ. ವೈಯಕ್ತಿಕ ಸಮಸ್ಯೆಯಿಂದ ಅಥವಾ ಇತರ ವಿಚಾರದಿಂದ ನೊಂದು ಈ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Advertisement

ಪೊಲೀಸರು ತನಿಖೆ ಮುಂದುವರಿಸಿದ್ದಾರೆ.