ಭಾನುವಾರ, 25 ಅಕ್ಟೋಬರ್ 2026
Trending

ಮೂಡುಬಿದಿರೆ: ಅರ್ಚಕರ ಪತ್ನಿ ಆತ್ಮಹತ್ಯೆ!

ಮೂಡಬಿದಿರೆ: ತಾಲೂಕಿನ ಬಿಜಾರು ಕೊಪ್ಪದ ಕುಬೇರು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿರುವ ಕುರಿತು ವರದಿಯಾಗಿದೆ.

Sponsored

ಸ್ಥಳೀಯ ಅರ್ಚಕರಾದ ಗುರುಭಟ್ ಅವರ ಪತ್ನಿ ಸ್ನೇಹಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಸದ್ಯಕ್ಕೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ರವಾನಿಸಲಾಗಿದ್ದು. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮೃತ ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.