ಸೋಮವಾರ, 26 ಅಕ್ಟೋಬರ್ 2026
Trending

Bengaluru : 17 ವರ್ಷದ ಮಗಳನ್ನು ಕೊಂದು ತನೂ ಆತ್ಮಹತ್ಯೆ ಮಾಡಿಕೊಂಡ ತಾಯಿ !!

Bengaluru : ಬೆಂಗಳೂರಿನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಹೆತ್ತ ತಾಯಿಯೇ ತನ್ನ 17 ವರ್ಷದ ಮಗಳನ್ನು ಕೊಂದು ತಾನೂ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Sponsored

40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನಗರದ ವೈಟ್‌ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ಈ ಕೃತ್ಯ ನಡೆದಿದೆ. 40 ವರ್ಷದ ಸುವರ್ಣ ಹಾಗೂ ಅವರ 14 ವರ್ಷದ ಪುತ್ರಿ ಕಾರುಣ್ಯ ಮೃತಪಟ್ಟವರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುವರ್ಣ ಅವರು ಮೊದಲು ತನ್ನ ಮಗಳು ಕಾರುಣ್ಯಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಮಗಳು ಮೃತಪಟ್ಟಿದ್ದಾಳೆ ಎಂದು ಖಚಿತಪಡಿಸಿಕೊಂಡ ಬಳಿಕ, ಅದೇ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ತಾವೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.

ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.