ಚೆನ್ನೈ: 617 ಬಗೆಯ ಖಾದ್ಯಗಳನ್ನು ತಯಾರಿಸಿ ಗಿನ್ನೆಸ್ ವಿಶ್ವ ದಾಖಲೆ ಸೇರಿದ್ದ, ಪದ್ಮಶ್ರೀ ಪುರಸ್ಕೃತ ಖ್ಯಾತ ಶೆಫ್ ದಾಮು ಅವರು ತಮ್ಮ 72 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಕಳೆದ ಕೆಲ ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ (ಅ.25) ಚೆನ್ನೈನಲ್ಲಿ ನಿಧನ ಹೊಂದಿದ್ದಾರೆ.
Sponsoredʼಕುಕ್ ವಿತ್ ಕೋಮಾಲಿʼ ಕಾರ್ಯಕ್ರಮದ ಮೂಲಕ ಇವರು ತಮಿಳುನಾಡಿನಲ್ಲಿ ಮನೆ ಮಾತಾಗಿದ್ದರು.
ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಶೆಫ್ ದಾಮು ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದರೆ.
1954 ರಲ್ಲಿ ಜನಿಸಿದ ದಾಮೋದರನ್ ಅವರು ಚೆನ್ನೈನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಶಿಕ್ಷಣ ಪಡೆದಿದ್ದು, ನಂತರ ತಮಿಳುನಾಡು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ (ಟಿಟಿಡಿಸಿ) ಮ್ಯಾನೇಜ್‌ಮೆಂಟ್ ಟ್ರೇನಿಯಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ್ದರು.




