ಭಾನುವಾರ, 25 ಅಕ್ಟೋಬರ್ 2026
Trending

ಪುಂಜಾಲಕಟ್ಟೆ: ಟೆಂಪೋ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಪೂಂಜಾಲಕಟ್ಟೆ: ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್‌ (25) ಚಿಕಿತ್ಸೆ ಫಲಕಾರಿಯಾಗದೆ ಆ.27 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Sponsored

ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುವಾಗ ಟೆಂಪೋ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ತಲೆಯ ಭಾಗಕ್ಕೆ ಹಾಗೂ ಎದೆಗೆ ತೀವ್ರ ಏಟಾಗಿದ್ದ ಪರಿಣಾಮ ಎಂಟು ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.