ಪುತ್ತೂರು; ವಿದ್ಯಾರ್ಥಿಯೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ ಗೌಡ ಎನ್ನುವವರ ಪುತ್ರ, ನಿಂತಿಕಲ್ಲು ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶಿಶಿಲ್ (15) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಕೆಲ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದೆ, ಈ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅದಾಗಲೇ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

