ಶನಿವಾರ, 24 ಅಕ್ಟೋಬರ್ 2026

ಸ್ಯಾಂಡಲ್‌ವುಡ್‌ ನಟಿ ಕ್ರಿಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್‌ ಸಾವಿಗೆ ಶರಣು

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಸ್ಯಾಂಡಲ್‌ವುಡ್‌ ನಟಿ ಕ್ರಿಷಿ ತಾಪಂಡ ಗೆಳೆಯ ನಟಿಯ ಅಪಾರ್ಟ್‌ಮೆಂಟ್‌ನಲ್ಲಿಯೇ ನೇಣು ಬಿಗಿದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ವೈಶಾಕ್‌ ಎಂದು ಗುರುತಿಸಲಾಗಿದೆ.

ಆರ್‌ ಆರ್‌ ನಗರದ ಪ್ರತಿಷ್ಠಿತ ʼಎಲಿಗಂಟ್ಸ್‌ ಅಪಾರ್ಟ್‌ಮೆಂಟ್‌ʼ ನಲ್ಲಿ ದುರಂತ ನಡೆದಿದೆ. ನಿನ್ನೆ ರಾತ್ರಿ ನಟಿ ಕ್ರಿಷಿ ತಾಪಂಡ ಫ್ಲಾಟ್‌ಗೆ ಬಂದಿದ್ದ ವೈಶಾಕ್‌, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಫ್ಯಾನ್‌ಗೆ ನೇಣು ಬಿಗಿದು ಕೊಂಡಿರುವುದಾಗಿ ವರದಿಯಾಗಿದೆ. ಘಟನೆ ಸಂದರ್ಣ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ್ದಾರೆ.

ವೈಶಾಕ್‌ ಸಾವಿನ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್‌ಮೆಂಟ್‌ಗೆ ಧಾವಿಸಿದ ಪೊಲೀಸರು ಪರಿಶೀಲನೆ ಮಾಡಿ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ವೈಶಾಕ್‌ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.