ಶನಿವಾರ, 24 ಅಕ್ಟೋಬರ್ 2026

ಉಪ್ಪಿನಂಗಡಿ: ಆಸಿಡ್‌ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಪೌವತ್ತಿಲ್‌ ಪದಂಬಳ ನಿವಾಸಿ ಪಿ.ವಿ. ಜೋಸ್‌ (64) ಅವರು ಆಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಸುಮಾರು ಎರಡು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಗುರುವಾರ ರಬ್ಬರ್‌ ಕೃಷಿಗಾಗಿ ತಂದಿಟ್ಟಿದ್ದ ಆಸಿಡ್‌ ಸೇವಿಸಿದ್ದು, ತೀರಾ ಅಸ್ವಸ್ಥಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.