ಸೋಮವಾರ, 26 ಅಕ್ಟೋಬರ್ 2026
Trending

ವರದಕ್ಷಿಣೆ ಕಿರುಕುಳ, ವಿಷ ಸೇವಿಸಿದ್ದ ಮಹಿಳೆ ಸಾವು

Image Credit: udayavani

ತೀರ್ಥಹಳ್ಳಿ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ತೀರ್ಥಹಳ್ಳಿಯ ಮಹಿಳೆಯೊಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅ.25 ರಂದು ಸಾವಿಗೀಡಾಗಿದ್ದಾರೆ.

Sponsored

ತೀರ್ಥಹಳ್ಳಿಯ ಹೊದಲ ಗ್ರಾಮದ ಅಕ್ಷತಾ (30) ಮೃತಪಟ್ಟ ಮಹಿಳೆ. ಮೃತ ಮಹಿಳೆಯ ತಾಯಿ ನೀಡಿದ ದೂರಿನ ಆಧಾರದಲ್ಲಿ ನಾಲ್ವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

Advertisement

ಅಕ್ಷತಾ ಅವರನ್ನು ಎಂಟು ವರ್ಷಗಳ ಹಿಂದೆ ಪುರುಷೋತ್ತಮ್‌ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಅ.13 ರಂದು ಮನೆಯಲ್ಲಿ ಕೌಟುಂಬಿಕ ಕಲಹ ನಡೆದಿದ್ದು, ಪತಿ ಪುರುಷೋತ್ತಮ್‌ ಎದುರೇ ಅತ್ತೆ ಲೀಲಾವತಿ ಅವರು ಅಕ್ಷತಾ ಮೇಲೆ ಪೊರಕೆಯಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ನೊಂದ ಅಕ್ಷತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.