ಶನಿವಾರ, 24 ಅಕ್ಟೋಬರ್ 2026

ಮದುವೆಗೆ ಕೆಲವೇ ದಿನಗಳಿರುವಾಗ ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಮಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.

ಅಭಿಷೇಕ್‌ (25) ಆತ್ಮಹತ್ಯೆಗೆ ಶರಣಾದ ಯುವಕ.

ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ನಿಗದಿಯಾಗಿತ್ತು. ಮನೆಯಲ್ಲಿ ಸಂಭ್ರಮದ ಸಿದ್ಧತೆ ನಡೆಯುತ್ತಿತ್ತು. ಆದರೆ ನಾಲ್ಕು ದಿನದ ಹಿಂದೆ ಯುವಕ ಮನೆಯಲ್ಲಿ ವಿಷ ಸೇವಿಸಿದ್ದು, ಆತನನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಆತ ಸಾವಿಗೀಡಾಗಿದ್ದಾನೆ.

ಅಭಿಷೇಕ್‌ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.