# ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ

- Link: https://hosakannada.com/death/young-man-flies-to-pushkar-and-commits-suicide/
- Published: 2026-09-23T11:17:23+00:00
- Author: ಹೊಸಕನ್ನಡ ನ್ಯೂಸ್

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ 
ಮಂಗಳವಾರ ರಾತ್ರಿ ನಡೆದಿದೆ. ಕೋಟೇಶ್ವರ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ
ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡವರು.

Sponsored

ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪದ್ಮನಾಭ ಅವರು ಕಳೆದ ನಾಲ್ಕು ತಿಂಗಳಿನಿಂದ 
ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಂಗಳವಾರ ಮನೆಯಿಂದ ಹೊರಟಿದ್ದು ರಾತ್ರಿಯಾದರೂ ಮನೆಗೆ ಬಂದಿರದ
ಕಾರಣ ಹುಡುಕಾಟ ನಡೆಸಿದ್ದು, ಬುಧವಾರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗೆಂದು
ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Advertisement

Advertisement

Advertisement
