Home Education BIGG NEWS : CET ರ‌್ಯಾಂಕ್ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ನಿಂದ ಆದೇಶ

BIGG NEWS : CET ರ‌್ಯಾಂಕ್ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ನಿಂದ ಆದೇಶ

Hindu neighbor gifts plot of land

Hindu neighbour gifts land to Muslim journalist

ಪ್ರಸಕ್ತ ಸಾಲಿನ ಸಿಇಟಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್, 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಪರ ತೀರ್ಪು ನೀಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ‌್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ‌್ಯಾಂಕ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಹೈಕೋರ್ಟ್ ನಿರ್ದೇಶನ ನೀಡಿದೆ.

2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು. 30ರಂದು ಹೊರ ಡಿಸಿದ್ದ ಟಿಪ್ಪಣಿಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಇದರಿಂದ ಕೋವಿಡ್-19 ಕಾರಣದಿಂದ ಪರೀಕ್ಷೆ ಬರೆಯದೆ “ಆಂತರಿಕ ಮೌಲ್ಯಮಾಪನದ’ ಆಧಾರದಲ್ಲಿ 2021ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯು ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಅನುಕೂಲವಾದಂತಾಗಿದೆ.

ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ‌್ಯಾಂಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಹೈಕೋರ್ಟ್ ತಿಳಿಸಿದೆ.

2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್ ಈಶ್ವರ್ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ತೀರ್ಪನ್ನು ಪ್ರಕಟಿಸಿತು.

ಲಾಭ : ಪುನರಾವರ್ತಿತ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಶೇ.50ರಷ್ಟು ಅಂಕ ಗಳನ್ನು ಪರಿಗಣಿಸುವಂತೆ ತೀರ್ಪು ನೀಡಿ ರುವುದರಿಂದ ರ‌್ಯಾಂಕ್ ಪಟ್ಟಿಯಲ್ಲಿ ಹಿಂದಿದ್ದ ವಿದ್ಯಾರ್ಥಿಗಳಿಗೆ ಅನುಕೂಲ.
ಪುನರಾವರ್ತಿತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ.
ಸರಕಾರದ ಎಡವಟ್ಟಿನಿಂದ ನೊಂದಿದ್ದ ವಿದ್ಯಾರ್ಥಿಗಳನ್ನು ನ್ಯಾಯಾಲಯದ ತೀರ್ಪು ಅತಂತ್ರ ಪರಿಸ್ಥಿತಿಯಿಂದ ಪಾರು ಮಾಡಿದೆ

ನಷ್ಟ: ಈ ವರ್ಷ ಸಿಇಟಿ ಬರೆದಿರುವ ವಿದ್ಯಾರ್ಥಿಗಳು ರ‌್ಯಾಂಕ್ ಪಟ್ಟಿಯಲ್ಲಿ ಹಿಂದುಳಿಯಬಹುದು.
ಮೊದಲ ಸುತ್ತಿನಲ್ಲಿಯೇ ಸೀಟು ಸಿಗಲಿದೆ ಎಂದು ಖುಷಿಯಲ್ಲಿದ್ದವರು 2ನೇ ಸುತ್ತಿನಲ್ಲಿ ಅಥವಾ 3ನೇ
ಸುತ್ತಿನವರೆಗೂ ಸೀಟಿಗಾಗಿ ಕಾಯಬೇಕಾಗಬಹುದು ಅಥವಾ ಸೀಟು ಸಿಗದಿರಬಹುದು.
ರ‌್ಯಾಂಕ್ ಪಟ್ಟಿ ಪ್ರಕಟಿಸುವುದು ಸೇರಿದಂತೆ ಪ್ರಕ್ರಿಯೆಯನ್ನು ಕೆಇಎ ಮತ್ತೆ ಹೊಸದಾಗಿ ನಡೆಸಬೇಕಾಗುತ್ತದೆ. ಇದು ಕೆಇಎ ದೊಡ್ಡ ಹೊಡೆತ.
ಪ್ರಕ್ರಿಯೆ ನಡೆಸಲು ಸಾಕಷ್ಟು ಸಮಯದ ಅವಶ್ಯಕತೆ
ಇರುವುದರಿಂದ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಬೋಧನ ತರಗತಿಗಳು ತಪ್ಪಲಿವೆ.