ಸೋಮವಾರ, 26 ಅಕ್ಟೋಬರ್ 2026
Trending

ದ್ವಿತೀಯ ಪಿಯುಸಿ ಪರೀಕ್ಷೆ: ರಾಜ್ಯಕ್ಕೆ ಪ್ರಥಮ ಸ್ಥಾನದ ಪಡೆದ ದಕ್ಷಿಣ ಕನ್ನಡದ ದಿಶಾ, ವಿಜಯನಗರ ಜಿಲ್ಲೆಗೆ 2ನೇ ಸ್ಥಾನ

2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, 600 ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ.

Sponsored

ಇನ್ನು ಕಲಾ ವಿಭಾಗದಲ್ಲೀ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಸಂಗೀತಾ ಮತ್ತು ಅರ್ಚನಾ ಎಂಬ ಇಬ್ಬರು ವಿದ್ಯಾರ್ಥಿನಿಯರು ತಲಾ 598 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Advertisement