ಶನಿವಾರ, 24 ಅಕ್ಟೋಬರ್ 2026

Medical College : ರಾಜ್ಯದಲ್ಲಿ 3 ಹೊಸ ಮೆಡಿಕಲ್ ಕಾಲೇಜ್!!

Medical College : ರಾಜ್ಯದಲ್ಲಿ ಮೂರು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಪ್ರಸ್ತಾವವನ್ನು ಸಲ್ಲಿಸಲಾಗಿದೆ ಇದು ಸಕ್ಸಸ್ ಆದರೆ ಸುಮಾರು 600 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸೀಟು ದೊರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಮನಗರ, ಬಾಗಲಕೋಟೆ, ಕನಕಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಅನುಮತಿ ದೊರೆತರೆ ರಾಜ್ಯದಲ್ಲಿ 600 ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ಮೆಡಿಕಲ್ ಸೀಟು ಪ್ರವೇಶ ಪಡೆಯಬಹುದು ಎಂದು ಹೇಳಿದ್ದಾರೆ.

ಅಲ್ಲದೆ ಮುಂದಿನ ಐದು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಮತ್ತು ಕ್ಯಾನ್ಸರ್ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.