ಸೋಮವಾರ, 26 ಅಕ್ಟೋಬರ್ 2026
Trending

ದೇಶಾದ್ಯಂತ 58 ಎಂಜಿನಿಯರಿಂಗ್ ಕಾಲೇಜುಗಳು ಬಂದ್ – ಕರ್ನಾಟಕದ 2 ಕಾಲೇಜುಗಳಿಗೂ ಬೀಗ!!

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE)ಯು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದೇಶಾದ್ಯಂತ ಒಟ್ಟು 58 ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜುಗಳನ್ನು ಮುಚ್ಚಲು ಅನುಮತಿ ನೀಡಿದೆ. ಈ ಪಟ್ಟಿಯಲ್ಲಿ ಪಟ್ಟಿಯಲ್ಲಿ ಕರ್ನಾಟಕದ ಎರಡು ಪ್ರಮುಖ ಕಾಲೇಜುಗಳು ಕೂಡ ಸೇರಿವೆ.

Sponsored

ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ 12 ಕಾಲೇಜುಗಳು ಬಂದ್ ಆಗುವ ಮೂಲಕ ದೇಶದಲ್ಲೇ ಅತಿ ಹೆಚ್ಚು ನಷ್ಟ ಅನುಭವಿಸಿವೆ. ಉಳಿದಂತೆ ಮಧ್ಯಪ್ರದೇಶದಲ್ಲಿ 8, ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ತಲಾ 4 ಕಾಲೇಜುಗಳು ಮುಚ್ಚಲ್ಪಟ್ಟಿವೆ. ಈ 58 ಸಂಸ್ಥೆಗಳಲ್ಲಿ 3 ಸರ್ಕಾರಿ ಅನುದಾನಿತ ಕಾಲೇಜುಗಳು. ಉಳಿದವು ಖಾಸಗಿ ಒಡೆತನದ ಸ್ವಾಯತ್ತ ಸಂಸ್ಥೆಗಳಾಗಿವೆ. ಆದ್ರೆ ಕಾಲೇಜು ಹೆಸರುಗಳು  ಇದುವರೆಗೂ ಬಹಿರಂಗಗೊಂಡಿಲ್ಲ.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಕುಸಿದಿರುವುದು, ಅರ್ಹ ಬೋಧಕ ಸಿಬ್ಬಂದಿಗಳ ಕೊರತೆ ಮತ್ತು AICTE ನಿಗದಿಪಡಿಸಿದ ಮೂಲಸೌಕರ್ಯ ನಿಯಮಗಳನ್ನು ಪಾಲಿಸದಿರುವುದು ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳಾಗಿವೆ. ಕಾಲೇಜುಗಳ ಮುಚ್ಚುವಿಕೆಯ ಜೊತೆಗೆ, ದೇಶದ ವಿವಿಧ ತಾಂತ್ರಿಕ ಸಂಸ್ಥೆಗಳಲ್ಲಿ ಬೇಡಿಕೆಯಿಲ್ಲದ ಸುಮಾರು 950ಕ್ಕೂ ಹೆಚ್ಚು ಕೋರ್ಸ್‌ಗಳನ್ನು ಸಹ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಆದರೆ, ಈಗಾಗಲೇ ಈ ಕಾಲೇಜುಗಳಲ್ಲಿ ಓದುತ್ತಿರುವ ಹಳೆಯ ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಬೇಡ ಎಂದು AICTE ಸ್ಪಷ್ಟಪಡಿಸಿದೆ. ‘ಹಂತ ಹಂತದ ಸ್ಥಗಿತ’ (Progressive Closure) ನಿಯಮದಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.