Home Education ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ...

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ ಸಿ ನಾಗೇಶ್

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಕೆ ಇಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಾಗಿ ರಾಜ್ಯ ಸರ್ಕಾರ ಯಾವತ್ತೂ ಹೇಳಿಲ್ಲ. ಮನುಷ್ಯನ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಾಗಿರುವ ಶಿಕ್ಷಣವನ್ನು ಕಲಿಸುವತ್ತ ಗಮನ ಹರಿಸಲಾಗಿದೆ ಎಂದರು.
ಇನ್ನು ಕೆಲ ನೈತಿಕ ಅಂಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡುವುದರೊಂದಿಗೆ ಜೀವನಕ್ಕೆ ಬೇಕಾದ ಶಿಕ್ಷಣವನ್ನು ನಾವು ಹೇಳಿಕೊಡುತ್ತೇವೆಯೇ ಹೊರತು, ಧಾರ್ಮಿಕ ರೀತಿಯಲ್ಲಿ ಹೇಳಿಕೊಡುವುದಿಲ್ಲ ಎಂದು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.