ಭಾನುವಾರ, 25 ಅಕ್ಟೋಬರ್ 2026

ಜನಿವಾರ ಮತ್ತು ಹಿಜಾಬ್ ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ CET ಮರು ಪರೀಕ್ಷೆ!!

ಇತ್ತೀಚಿಗಷ್ಟೇ ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ಮತ್ತು ಹಿಜಾಬ್ ಸಮಸ್ಯೆಗಳ ಕಾರಣದಿಂದಾಗಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಇದೀಗ ಈ ರೀತಿ ಪರೀಕ್ಷೆ ಯಿಂದ ವಂಚಿತವಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ತಿಳಿಸಿದ್ದಾರೆ.

Sponsored

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಿವಾರ ಹಾಗೂ ಹಿಜಬ್‌ಗೆ (Hijab) ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಆದ್ದರಿಂದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ 

Marriage AdMarriage AdSponsored

ಅಲ್ಲದೆ ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ಕೊಡೋದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ, ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡೋದು ಸೂಕ್ತ ಅಂತ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.