Home Education CET : ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ

CET : ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ‌್ಯಾಂಕಿಂಗ್ ಅನ್ವಯ ಅ.10 ರಿಂದ ಪ್ರಕ್ರಿಯೆ ಆರಂಭವಾಗಲಿವೆ. ಇಂಜಿನಿಯರಿಂಗ್ ಸೇರಿದಂತೆ ಈ ಪ್ರಕ್ರಿಯೆ ಆರಂಭವಾಗಲಿದೆ. ಕೋರ್ಸ್ ವಾರು ಸೀಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಅ. 10 ರಂದು ಬೆಳಿಗ್ಗೆ 11 ಗಂಟೆ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಅ. 10 ರಿಂದ 12 ರವರೆಗೆ ವೆಬ್ ಸೈಟ್ ನಿಂದ ಪರಿಶೀಲನೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅ. 11 ರಂದು ಮಧ್ಯಾಹ್ನ 2 ಗಂಟೆಯಿಂದ 13 ರಂದು ಸಂಜೆ 4 ಗಂಟೆಯೊಳಗೆ ಅರ್ಹ ಅಭ್ಯರ್ಥಿಗಳು ತಮ್ಮ ಇಚ್ಛೆಯ ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು.

ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಇನ್ನಿತರ ದಾಖಲೆಗಳನ್ನು ಸಲ್ಲಿಸದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆಗೆ ಅಕ್ಟೋಬರ್ 11 ರಂದು ಬೆಳಗ್ಗೆ 9:30ಕ್ಕೆ ಪ್ರಾಧಿಕಾರದ ಕಚೇರಿಗೆ ಹಾಜರಾಗಲು ಕೊನೆಯ ಅವಕಾಶ ನೀಡಲಾಗಿದೆ.