Home Education ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ!

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ!

Hindu neighbor gifts plot of land

Hindu neighbour gifts land to Muslim journalist

ವಿದ್ಯಾಸಿರಿ ಯೋಜನೆಯು ಮಕ್ಕಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಸ್ತುತ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿ ಗಳು ಮೆಟ್ರಿಕ್ ನಂತರದ ಕೊರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿಯಡಿ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ಕೆಲವು ಕಾರಣಗಳ ಸಲುವಾಗಿ ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ https;//sevasindu.karnataka.gov.in ಮೂಲಕ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ವಿಭಾಗದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ನಂ: 8277799990ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ವಿದ್ಯಾಸಿರಿ ಸೌಲಭ್ಯ ಪಡೆಯುವ ಉದ್ದೇಶದಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸುವ ಈ ನಿರ್ಧಾರ ಕೈಗೊಳ್ಳಲಾಗಿದೆ.