Home Education ಒಂದು ತಿಂಗಳಿಗೆ ಪದವಿ ಪರೀಕ್ಷೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯಗಳಿಗೆ ಸೂಚನೆ!!!

ಒಂದು ತಿಂಗಳಿಗೆ ಪದವಿ ಪರೀಕ್ಷೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯಗಳಿಗೆ ಸೂಚನೆ!!!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕೊರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಕೆಲವೊಂದು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಪಠ್ಯಕ್ರಮವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರಿಂದ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು.

ಉನ್ನತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.