Home Education ಶಿಕ್ಷಕರಿಗೆ ಸಿಹಿ ಸುದ್ದಿ: ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ

ಶಿಕ್ಷಕರಿಗೆ ಸಿಹಿ ಸುದ್ದಿ: ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್‌ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಮೂರು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಸುಮಾರು 2000 ಕ್ಕೂ ಹೆಚ್ಚು ಮುಖ್ಯ ಶಿಕ್ಷಕರಿಗೆ ಬಡ್ತಿ ಭಾಗ್ಯ ಸಿಗುವ ಸಾಧ್ಯತೆ ಇದೆ.

ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಜನವರಿ 1 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಮುಖ್ಯ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರಕಟ ಮಾಡಿದ ಬಳಿಕ ವಿವಿಧ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿ ಕೌನ್ಸೆಲಿಂಗ್‌ ಮೂಲಕ ಬಡ್ತಿ ನೀಡಿ ಸ್ಥಳ ನಿಯೋಜನೆ ಮಾಡಲಾಗುವುದು.

ಜ.31ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದ್ದಾರೆ.