ಶನಿವಾರ, 24 ಅಕ್ಟೋಬರ್ 2026

Education Dept: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ-ನೋಟ್ ಬುಕ್, ಸರ್ಕಾರ ಘೋಷಣೆ

Education Dept: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ  (Students)  ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್​ ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಹೌದು, ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಶಿಕ್ಷಣ ಇಲಾಖೆ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆ ಸಂಬಂಧ ಶಿಕ್ಷಣ ಇಲಾಖೆಯು 30 ಕೋಟಿ 83 ಲಕ್ಷದ 25 ಸಾವಿರ ಹಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆ ಸರ್ಕಾರ ಸಹ ಒಪ್ಪಿಗೆ ಸೂಚಿಸಿದ್ದು, 290.46 ಕೋಟಿ ರೂ ಅನುದಾನವನ್ನು ಶಾಲಾ ಶಿಕ್ಷಣ ಇಲಾಖೆಗೆ ಗ್ರೀನ್ ಸಿಗ್ನಲ್ ನೀಡಿದೆ. 

ಅಲ್ಲದೆ ಪಠ್ಯಪುಸ್ತಕಗಳ ಕಾಗದ ಮತ್ತು ಮುದ್ರಣ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಹೆಚ್ಚುವರಿ ಪುಸ್ತಕಗಳ ಬೇಡಿಕೆ ಸಲ್ಲಿಸಿ ಅಕ್ರಮ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.