ಶನಿವಾರ, 24 ಅಕ್ಟೋಬರ್ 2026

Madu Bangarappa : 1 ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ ಮಾಡಿ ಸರ್ಕಾರ ಆದೇಶ

Madu Bangarappa: ಶಾಲಾ ದಾಖಲಾತಿ ವಯಸ್ಸಿನ ಮಿತಿಯ ವಿಚಾರವಾಗಿ  ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಸಡಿಲಿಕೆ ಮಾಡಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಹೊರಡಿಸಿದ್ದಾರೆ.

ಒಂದನೇ ತರಗತಿಗೆ ಪ್ರವೇಶ ಪಡೆಯಲು ಜೂನ್ 1ಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮವಿತ್ತು. ಆದರೆ ಇದೀಗ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಗುವಿಗೆಈ ಬಾರಿ 60 ದಿನಗಳ ರಿಯಾಯಿತಿ ನೀಡಲಾಗಿದೆ. ಅಂದರೆ, ನಿಗದಿತ ದಿನಾಂಕಕ್ಕೆ ಎರಡು ತಿಂಗಳು ಬಾಕಿ ಇರುವ ಮಕ್ಕಳಿಗೂ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಸಿಗಲಿದೆ.

ಶಾಲಾ ದಾಖಲಾತಿಗಾಗಿ ಬಳಸುವ ತಂತ್ರಾಂಶದಲ್ಲಿ (Software) ಈ ಬದಲಾವಣೆಯನ್ನು ತಕ್ಷಣವೇ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರಿಂದ ತಾಂತ್ರಿಕ ತೊಂದರೆಯಿಲ್ಲದೆ ಮಕ್ಕಳು ಶಾಲೆಗೆ ಸೇರಬಹುದಾಗಿದೆ.