ಭಾನುವಾರ, 25 ಅಕ್ಟೋಬರ್ 2026
Trending

SSLC ಯಲ್ಲಿ ಹಿಂದಿಗೆ ಗ್ರೇಡ್ ಬದಲು ಅಂಕ ನೀಡಿ ಎಂದ ಹೈಕೋರ್ಟ್- ಮುಂದಿನ ನಡೆ ಬಗ್ಗೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

SSLC: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಈ ಬಗ್ಗೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Sponsored

2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ (Hindi) ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕದ ಬದಲಿಗೆ ಗ್ರೇಡ್ ನೀಡಲಾಗುವುದು ಎಂದು ಕ್ಷಣ ಇಲಾಖೆ ತಿಳಿಸಿತ್ತು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ, ಆದರೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಜತೆ ಚರ್ಚಿಸಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ನಾನು ಅಡ್ವೊಕೇಟ್ ಜನರಲ್ ಜತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇವೆ. ನಾಳೆ ಸಿಎಂ ಅವರನ್ನು ಭೇಟಿ ಮಾಡಿ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಈ ವಿಚಾರದ ಬಗ್ಗೆ ವಿದ್ಯಾರ್ಥಿಗಳು ಆತಂಕಗೊಳ್ಳಬಾರದು. ಯಾವುದೇ ಕಾರಣಕ್ಕೂ ಮಕ್ಕಳು ಗಾಬರಿಯಾಗಬಾರದು ಎಂದು ಮನವಿ ಮಾಡಿದರು. ಅಲ್ಲದೆ ಆದೇಶ ಈಗಷ್ಟೇ ಬಂದಿದೆ. ಅದರ ಪ್ರತಿ ನಮಗೆ ಸಿಗಬೇಕು. ನಂತರ ಸಂಪೂರ್ಣ ಪರಿಶೀಲನೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.