ಭಾನುವಾರ, 25 ಅಕ್ಟೋಬರ್ 2026

ಜೂನ್‌ 22 ರಂದು ಮಂಗಳೂರಿನಲ್ಲಿ ಉದ್ಯೋಗ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ

Job Alert

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದ ಅನುಸಾರ, ಮಂಗಳೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್‌ 22 ರಂದು ಬೃಹತ್‌ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್‌ ಮೇಳವನ್ನು ಹಮ್ಮಲಾಗಿದೆ. ಈ ಮೇಳವು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ನಡೆಯಲಿದೆ.

Sponsored

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪ್ರಮುಖ ಉದ್ಯಮ ಸಂಸ್ಥೆಗಳು ಈ ಮೇಳದಲ್ಲಿ ಭಾಗವಹಿಸುತ್ತಿದೆ. ಆಯಾ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹಾಗೂ ಅಪ್ರೆಂಟಿಶಿಪ್‌ ತರಬೇತಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ.

Marriage AdMarriage AdSponsored

ಐಟಿಐ ಕೋರ್ಸ್‌ ಮುಗಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಐಟಿಐನಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಕೂಡಾ ಇದರಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ಮೂಲ ದಾಖಲಾತಿಗಳು ಹಾಗೂ ಜೆರಾಕ್ಸ್‌ ಪ್ರತಿಗಳ ಜೊತೆ ಮೇಳಕ್ಕೆ ಹಾಜರಾಗಬೇಕಿದೆ.