Home Education Second PUC : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಇತ್ತ ಗಮನಿಸಿ, ಮಹತ್ವದ ಮಾಹಿತಿ ನಿಮಗಾಗಿ!!!

Second PUC : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಇತ್ತ ಗಮನಿಸಿ, ಮಹತ್ವದ ಮಾಹಿತಿ ನಿಮಗಾಗಿ!!!

second puc second puc students second puc exam

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಮಾರ್ಚ್ 2023ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ. ಈ ಕುರಿತು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಸದ್ಯ ಮುಂದಿನ ತಿಂಗಳು ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಾಗಿ ( Karnataka Second PUC Annual Examination 2023 ) ಇಂದು ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ( Admission Ticket ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಮಾರ್ಚ್ 2023ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣ https://kseab.karnataka.gov.in ನ ಪಿಯು ಪರೀಕ್ಷೆ ಪೋರ್ಟಲ್ ಲಾಗಿನ್ ನಲ್ಲಿ ಬಿಡುಗಡೆ ಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಸದ್ಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು, ವಿದ್ಯಾರ್ಥಿಗಳಿಗೆ ದಿನಾಂಕ 24-02-2023ರೊಳಗೆ ವಿತರಿಸಲು ತಿಳಿಸಿದೆ.

ಇನ್ನೂ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿ ಏನಾದರೂ ತಪ್ಪಿದ್ದರೇ, ದಿನಾಂಕ 20-02-2023ರೊಳಗಾಗಿ ಈ ಕೆಳಕಂಡ ಶಾಖಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದೆ.

ಹೀಗಿದೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂತಿವೆ :
• ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್
• ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
• ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
• ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
• ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
• ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
• ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
• ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
• ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
• ದಿನಾಂಕ 21-03-2023, ಮಂಗಳವಾರ – ಹಿಂದಿ
• ದಿನಾಂಕ 23-03-2023, ಗುರುವಾರ – ಇಂಗ್ಲೀಷ್
• ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
• ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
• ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.

ಸದ್ಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ.