Home Education SSLC Result: ಎಸ್ಎಸ್ಎಲ್ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ಯಾದಗಿರಿ ಕೊನೆಯ ಸ್ಥಾನ

SSLC Result: ಎಸ್ಎಸ್ಎಲ್ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ಯಾದಗಿರಿ ಕೊನೆಯ ಸ್ಥಾನ

Karnataka SSLC Result 2024

Hindu neighbor gifts plot of land

Hindu neighbour gifts land to Muslim journalist

Karnataka SSLC Result 2024: ಮೇ. 9 ರಂದು (ಇಂದು) ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೊರಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದು, ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಉಡುಪಿ ಪ್ರಥಮ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಈ ಬಾರಿ ಕೂಡಾ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. 

ಈ ಬಾರಿ ಒಟ್ಟು ಫಲಿತಾಂಶ ಶೇ.73.40 ಆಗಿದೆ. ಒಟ್ಟು 63,12,04 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಶೇಕಡ 10 ಫಲಿತಾಂಶ ಕುಸಿತ ಆಗಿದೆ.

ಬಾಗಲಕೋಟೆಯ ಅಂಕಿತಾ ಬಸಪ್ಪ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನಗಳಿಸಿದ್ದಾರೆ. 625/625 ಅಂಕ ಪಡೆದಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ (624 ಅಂಕ) ಎರಡನೇ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ. ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

kseeb.kar.nic.in & karresults.nic.inನಲ್ಲಿ SSLC ಫಲಿತಾಂಶ ಲಭ್ಯವಿರಲಿದೆ.
ಪರೀಕ್ಷೆ ಬರೆದ ಅಭ್ಯರ್ಥಿಗಳು http://karresults.nic.in ವೆಬ್​​ಸೈಟ್​ನಲ್ಲಿ ಬೆಳಗ್ಗೆ 10:30ರ ನಂತರ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಬಾರಿ ಎಸ್​​ ಎಸ್​ ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಆಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಚೆಕ್‌ ಮಾಡಲು ವೆಬ್‌ಸೈಟ್‌ಗಳು
https://kseab.karnataka.gov.in
https://karresults.nic.in
https://sslc.karnataka.gov.in

ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶವಿದೆ. ಹಾಗಾಗಿ ವಿದ್ಯಾರ್ಥಿಗಳು ಎದೆಗುಂದಬಾರದು. ಹಾಗೆನೇ ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯುವ ಅವಕಾಶವಿದೆ.

ವಿದ್ಯಾರ್ಥಿಗಳ ಗಮನಕ್ಕೆ: ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಆನ್‌ಲೈನ್ ಮಾರ್ಕ್ ಶೀಟ್ ತಾತ್ಕಾಲಿಕವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳ ಅಧಿಕೃತ ಸೂಚನೆಯ ಪ್ರಕಾರ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ತಮ್ಮ ಶಾಲೆಗಳಿಂದ SSLC ಮಾರ್ಕ್‌ಶೀಟ್ ಪಡೆಯಬಹುದು.

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿಶಾಂಶವನ್ನು ಮೇ 08 ರಂದು ಪ್ರಕಟ ಮಾಡಲಾಗಿತ್ತು. ಉತ್ತೀರ್ಣ ಪ್ರಮಾಣ ಶೇ 83.89 ಬಂದಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕುರಿತು ಗಮನ ಹರಿಸಿದರೆ, ಪರೀಕ್ಷೆಯು ಮಾರ್ಚ್‌ 31ರಿಂದ ಎಪ್ರಿಲ್‌ 15 ರವರೆಗೆ ಪರೀಕ್ಷೆ ನಡೆದಿತ್ತು. ಕಳೆದ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದರು. ಕಳೆದ ವರ್ಷ ರಾಜ್ಯಕ್ಕೆ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನ, ಮಂಡ್ಯ ಎರಡನೇ ಸ್ಥಾನ, ಯಾದಗಿರಿ ಕೊನೆಯ ಸ್ಥಾನದಲ್ಲಿದ್ದವು. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು 13,18,19 ನೇ ಸ್ಥಾನ ಪಡೆದಿದ್ದವು.