# ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!!

- Link: https://hosakannada.com/education/neet-exam-scheduled-for-may-3rd-has-been-cancelled/
- Published: 2026-05-12T12:40:14+00:00
- Author: ಹೊಸಕನ್ನಡ ನ್ಯೂಸ್

ಭಾರತದ ಅತ್ಯಂತ ಪ್ರತಿಷ್ಠಿತ ಮತ್ತು ದೊಡ್ಡ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್ ಯುಜಿ 
2026’ ಮೇ 3 ರಂದು ನಡೆದಿತ್ತು. ಇದೀಗ ಶಾಕಿಂಗ್ ವಿಚಾರ ಬಂದು ಹೊರ ಬಿದ್ದಿದ್ದು ದೇಶಾದ್ಯಂತ ನಡೆದಿದ್ದ
ಈ ಪರೀಕ್ಷೆಯನ್ನು ಕೇಂದ್ರ ಸರ್ಕಾರವು ಅಧಿಕೃತವಾಗಿ ರದ್ದುಗೊಳಿಸಿದೆ.

Sponsored

ಹೌದು, ಮೇ 3ನೇ ತಾರೀಕಿನಂದು ದೇಶಾದ್ಯಂತ ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ಕೇಂದ್ರ ಸರ್ಕಾರವು
ಇದೀಗ ರದ್ದು ಪಡಿಸಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಗಂಭೀರ
ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅಲ್ಲದೆ ಈ ಹಗರಣದ ಆಳ ಮತ್ತು ವಿಸ್ತಾರವನ್ನು ಪತ್ತೆಹಚ್ಚಲು ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ(
CBI) ವಹಿಸಲಾಗಿದೆ.

Advertisement

Advertisement

ಮೇ 3 ರಂದು ಪರೀಕ್ಷೆ ಮುಗಿದ ಬೆನ್ನಲ್ಲೇ ರಾಜಸ್ಥಾನ ಮತ್ತು ಇತರ ಕೆಲವು ರಾಜ್ಯಗಳಿಂದ ಪ್ರಶ್ನೆ ಪತ್ರಿಕೆ
ಸೋರಿಕೆಯ ಬಗ್ಗೆ ದೂರುಗಳು ಕೇಳಿಬಂದಿದ್ದವು. ಆರಂಭದಲ್ಲಿ ಇವುಗಳನ್ನು ಕೇವಲ ವದಂತಿ ಎಂದು ಪರಿಗಣಿಸಲಾಗಿದ್ದರೂ,
ಕಾನೂನು ಜಾರಿ ಸಂಸ್ಥೆಗಳು ಮತ್ತು ಗುಪ್ತಚರ ಇಲಾಖೆಗಳು ನೀಡಿದ ಪ್ರಾಥಮಿಕ ವರದಿಗಳು ಪರೀಕ್ಷಾ ಪ್ರಕ್ರಿಯೆಯಲ್ಲಿ
ಲೋಪದೋಷಗಳು ಉಂಟಾಗಿರುವುದನ್ನು ದೃಢಪಡಿಸಿವೆ. ವಿಶೇಷವಾಗಿ ‘ಗೆಸ್ ಪೇಪರ್’ ಹೆಸರಿನಲ್ಲಿ ಪ್ರಶ್ನೆಗಳು
ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ
ಪರೀಕ್ಷೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಸರ್ಕಾರವು ಪರೀಕ್ಷೆಯನ್ನೇ ರದ್ದುಗೊಳಿಸುವ ತೀರ್ಮಾನಕ್ಕೆ
ಬಂದಿದೆ.

2024 ಮತ್ತು 2025 ರಲ್ಲೂ ಇಂತಹದೇ ಆರೋಪಗಳು ಕೇಳಿಬಂದಿದ್ದವು. 2024ರ ಪ್ರಕರಣದಲ್ಲಿ ಸಿಬಿಐ ಪಾಟ್ನಾ
ಮತ್ತು ಹಜಾರಿಬಾಗ್‌ನಲ್ಲಿ ಕೆಲವು ಆರೋಪಿಗಳನ್ನು ಬಂಧಿಸಿತ್ತು.

Advertisement
