Home Education NEET : ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕ ವಿದ್ಯಾರ್ಥಿಗಳಿಗೆ ವಾಪಾಸ್ | ಸಚಿವ ಡಾ.ಅಶ್ವತ್ಥ್...

NEET : ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕ ವಿದ್ಯಾರ್ಥಿಗಳಿಗೆ ವಾಪಾಸ್ | ಸಚಿವ ಡಾ.ಅಶ್ವತ್ಥ್ ನಾರಾಯಣ ಘೋಷಣೆ

Hindu neighbor gifts plot of land

Hindu neighbour gifts land to Muslim journalist

ನೀಟ್ ಪರೀಕ್ಷೆಯಲ್ಲಿ ವಿಳಂಬ ಆಗಿರುವುದರಿಂದ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ.

ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಶುಕ್ರವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ.

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೇ ನಡೆಯುತ್ತಿತ್ತು. ಈ ವರ್ಷ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿರುವುದರಿಂದ ವೈದ್ಯಕೀಯ ಸೀಟು ವಿಳಂಬ ಪಡೆದುಕೊಂಡಿದೆ. ಎಂಜಿನಿಯರಿಂಗ್ ಪ್ರವೇಶಾತಿ ಪಡೆದವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ ಆಸಕ್ತರು ಅಲ್ಲಿಗೇ ಹೋಗಬಹುದು. ಇದಕ್ಕೆ ಯಾವುದೇ ದಂಡ ವಸೂಲಿ ಇಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕ ಮುಟ್ಟುಗೋಲು ಮಾಡುವುದಿಲ್ಲ‌ ಬದಲಾಗಿ ಇದನ್ನು ವಿದ್ಯಾರ್ಥಿಗಳಿಗೇ ಹಿಂತಿರುಗಿಸಲಾಗುವುದು.

ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಆದರೆ ಈ ಬಾರಿ ವಿನಾಯಿತಿ ನೀಡಲಾಗಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದರು.