ಶುಕ್ರವಾರ, 30 ಅಕ್ಟೋಬರ್ 2026
Trending

ರಾಜ್ಯದಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ 3 ವರ್ಷ ಅನುಮತಿ ಇಲ್ಲ

2nd Puc Result
Advertisement
Advertisement

ರಾಜ್ಯದಲ್ಲಿ ಹೊಸ ಖಾಸಗಿ ಪದವಿಪೂರ್ವ (ಪಿಯು) ಕಾಲೇಜುಗಳನ್ನು ಆರಂಭ ಮಾಡಲು ಮುಂದಿನ ಮೂರು ಶೈಕ್ಷಣಿಕ ವರ್ಷಗಳವರೆಗೆ ಅನುಮತಿ ನೀಡದಿರಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. 2027-28 ನೇ ಶೈಕ್ಷಣಿಕ ವರ್ಷದಿಂದ 2029-30ನೇ ಶೈಕ್ಷಣಿಕ ವರ್ಷದವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರಡು ಅಧಿಸೂಚನೆ ಪ್ರಕಟ ಮಾಡಿದೆ. ಅಧಿಸೂಚನೆ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟವರು ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

Sponsored

ಪ್ರಸ್ತುತ ರಾಜ್ಯದಲ್ಲಿ 6000ಕ್ಕೂ ಹೆಚ್ಚು ಪಿಯು ಕಾಲೇಜುಗಳಿದೆ. ಈಗಾಗಲೇ ಇರುವ ಕಾಲೇಜುಗಳಲ್ಲೇ ಹೆಚ್ಚಿನ ಸಂಖ್ಯೆಯ ಸೀಟುಗಳು ಖಾಲಿ ಉಳಿಯುತ್ತಿರುವ ಹಿನ್ನೆಲೆಯಲ್ಲಿ ಹೊಸ ಕಾಲೇಜುಗಳಿಗೆ ಅನುಮತಿ ನೀಡುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಸರಕಾರ ಮುಂದಾಗಿದೆ.

Advertisement
Advertisement
Advertisement
Advertisement
Advertisement