Home Education ಮಳೆರಾಯನ ಆರ್ಭಟ : ಶಾಲೆಗಳಲ್ಲಿ ಈ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ

ಮಳೆರಾಯನ ಆರ್ಭಟ : ಶಾಲೆಗಳಲ್ಲಿ ಈ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟುಹಾಕುತ್ತಿದ್ದಾರೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಹೊರಡಿಸಿದೆ.

ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳಿಗೆ ಶಾಲಾ ಮುಖ್ಯೋಪಾದಯರು ಅಧಿಕಾರಿಗಳ ಸಹಮತಪಡೆದು ರಜೆ ಘೋಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಂದ ಮಕ್ಕಳನ್ನು ದೂರ ಇರಿಸಬೇಕು. ಅಂತಹ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿ ನಡೆಸುವುದಾಗಲಿ, ಅಲ್ಲಿರುವ ಶೌಚಾಲಯ ಬಳಸುವುದಾಗಲಿ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.