Home Education ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ...

ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 25

Hindu neighbor gifts plot of land

Hindu neighbour gifts land to Muslim journalist

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಸಿರಿಗೆರೆ ಸಂಸ್ಥೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಮೇ 19ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬೀಳಲಿದ್ದು, ಮೇ 25ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಮೇ. 26ರಂದು ಎಂ.ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 11ಕ್ಕೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ಕಾಲೇಜು ಶುಲ್ಕ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಎಂ.ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜು, ಸಿರಿಗೆರೆ-577541. ಮೊಬೈಲ್ ಸಂಖ್ಯೆ: 78928 93772, 96639 56275 ಸಂಪರ್ಕಿಸಬಹುದು.