

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ 2026ರ ಜ.27 ರಿಂದ ಫೆ.14 ರವರೆಗೆ ನಡೆಸಲು ಸುತ್ತೋಲೆ ಹೊರಡಿಸಿದೆ.
ಪ್ರಾಯೋಗಕ ಪರೀಕ್ಷೆಗಳನ್ನು ನಡೆಸುವ ಸಂಪೂರ್ಣ ಜವಾಬ್ದಾರಿ ಆಯಾ ಜಿಲ್ಲಾ ಉಪ ನಿರ್ದೇಶಕರದ್ದಾಗಿರುತ್ತದೆ. ಪ್ರಾಯೋಗಿಕ ಪರೀಕ್ಷೆಗಳಿರುವ ವಿಷಯಗಳಲ್ಲಿ ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದು ತಾತ್ವಿಕ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಪಡೆಯುತ್ತಿರುವುದರಿಂದ ಈ ಬಾರಿ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
ಪ್ರಾಯೋಗಿಕ ಪರೀಕ್ಷೆಯನ್ನು ನಿರ್ದಿಷ್ಟ ಪ್ರಯೋಗಗಳಿಗೆ ಮಾತ್ರ ಸೀಮತಗೊಳಿಸದೆ, ಪಠ್ಯಕ್ರಮದಲ್ಲಿ ನಿಗದಿಪಡಿಸಿರುವ ಎಲ್ಲಾ ಪ್ರಯೋಗಗಳನ್ನೊಳಗೊಂಡಂತೆ ಪರೀಕ್ಷೆಯನ್ನು ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಇನ್ನು 2026 ರ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್‌ನಲ್ಲಿ ಪ್ರವೇಶ ಪತ್ರಗಳನ್ನು ಮಂಡಳಿಯಿಂದ ಲಭ್ಯಗೊಳಿಸಲಾಗುವುದು. ಈ ಪ್ರವೇಶಪತ್ರಗಳನ್ನು ಮುದ್ರಿಸಿ ಪರೀಕ್ಷ ದಿನಾಂಕ, ಸಮಯ ಮತ್ತು ತಂಡದ ಸಂಖ್ಯೆಗಳನ್ನು ನಮೂದಿಸಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ವಿತರಿಸುವಂತೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಿದೆ.












