Home Education ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ ?

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ ?

Hindu neighbor gifts plot of land

Hindu neighbour gifts land to Muslim journalist

2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ.

ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ ಹೊರ ಹೊಮ್ಮಿದೆ.  ಮೂರನೇ ಸ್ಥಾನವನ್ನು ವಿಜಯಪುರ ಜಿಲ್ಲೆ ಪಡೆದುಕೊಂಡಿದೆ. ಕೊನೇ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಗೆ ಶೇ.49.31 ಫಲಿತಾಂಶ ಬಂದಿದೆ.

ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಳೆದ ಶೈಕ್ಷಣಿಕ ವರ್ಷದಲ್ಲಿಯೂ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಸಂಪಾದಿಸಿತ್ತು. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾವಾರು ಫಲಿತಾಂಶ ಕುಸಿತ ಕಂಡಿದೆ. ಆದರೂ ಸಹ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ. ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆ ಶೇ. 90.71 ಫಲಿತಾಂಶವನ್ನು ಸಂಪಾದಿಸಿತ್ತು ಈ ಬಾರಿ ಶೇ.88.02ಕ್ಕೆ ಕುಸಿತ ಕಂಡಿದೆ.