ಶನಿವಾರ, 24 ಅಕ್ಟೋಬರ್ 2026

ಶನಿವಾರದ ಶಾಲಾ ಸಮಯ ಬದಲಿಸಿ ರಾಜ್ಯ ಸರ್ಕಾರ ಆದೇಶ !!

ರಾಜ್ಯ ಸರ್ಕಾರವು ಶನಿವಾರದ ಶಾಲಾ ಸಮಯವನ್ನು ಬದಲಾವಣೆ ಮಾಡಿ ರಾಜ್ಯದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಹಿಸುದ್ದಿ ನೀಡಿದೆ. ಈ ಮೂಲಕ ಇನ್ನು ಮುಂದೆ ಶನಿವಾರ ಶಾಲೆಗಳು ಹೊಸ ಸಮಯದಂತೆ ನಡೆಯಲಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಸಮಯ ಜಾರಿಯಾಗಿದೆ.

ಇಲ್ಲಿಯವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಸಮಯ ಇತ್ತು. ಕೆಲವು ಶಾಲೆಗಳಲ್ಲಿ ಬೆಳಗ್ಗೆ 8ರಿಂದ 12 ಗಂಟೆಯವರೆಗೆ ತರಗತಿಗಳಿದ್ದರೆ, ಇನ್ನೂ ಕೆಲವು ಕಡೆ 7.30ರಿಂದ 11.30ರವರೆಗೆ ಶಾಲೆ ನಡೆಯುತ್ತಿತ್ತು. ಆದರೆ ಇನ್ನು ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ತರಗತಿಗಳು ನಡೆಯಲಿವೆ. 

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು “ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಒಂದೇ ಸಮಯವನ್ನು ಪಾಲಿಸಬೇಕು” ಎಂದು ಸೂಚನೆ ನೀಡಿದೆ. ಈ ನಿಯಮವು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.