Home Education ಶಿಕ್ಷಕರೇ ಗಮನಿಸಿ: ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರೇ ಗಮನಿಸಿ: ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

ಕಲಬುರಗಿ ‘ಸಿ’ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ವರ್ಗಾವಣೆ ಕಾಯ್ದೆಯನ್ವಯ ಪ್ರಸ್ತುತ ಸ್ಥಳದಲ್ಲಿ ಕನಿಷ್ಟ ಸೇವಾವಧಿಯನ್ನು ಪೂರೈಸಿದ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳಿಗೆ ಘಟಕದೊಳಗಿನ ‘ಎ’ ಮತ್ತು ‘ಬಿ’ ವಲಯಗಳಿಗೆ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದಂತೆ ಅರ್ಹ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಗರಿಮಾ ಪಂವಾರ ಅವರು ತಿಳಿಸಿದ್ದಾರೆ.

ಕಲಬುರಗಿ ವಿಭಾಗದ ವ್ಯಾಪ್ತಿಯಲ್ಲಿ 128 ಜನರಿಗೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಹುದ್ದೆಗೆ ನಿಯಮ-32ರಡಿ ಮುಂಬಡ್ತಿ ನೀಡಬೇಕಾಗಿರುವುದರಿಂದ ಸದರಿ ಹುದ್ದೆಗಳ ತೆರವುಗೊಳಿಸಬೇಕಾಗಿದೆ. ಹೀಗಾಗಿ ‘ಸಿ’ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳಿಗೆ ಘಟಕದೊಳಗೆ ಕೋರಿಕೆ ವರ್ಗಾವಣೆಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ನೌಕರರು ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್ https://sts.karnataka.gov.in/EEDS/login/load LoginPage.htm ಇ.ಇ.ಡಿ.ಎಸ್. ನೌಕರರ ಲಾಗಿನ್‌ದಲ್ಲಿ ಆನ್‌ಲೈನ್‌ ಮೂಲಕ 2022ರ ಅಕ್ಟೋಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವಾ ಟಪಾಲು ಮೂಲಕ ಅಥವಾ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ವರ್ಗಾವಣೆ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್ cpikalaburgi.karnataka.gov.in ಈಗಾಗಲೇ ಪ್ರಕಟಿಸಲಾಗಿದ್ದು, ಇದನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.