ಮಂಗಳವಾರ, 27 ಅಕ್ಟೋಬರ್ 2026
Trending

ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ರಮ್ಯಾ!

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಅವರು ವ್ಯಕ್ತಿಯೋರ್ವನ ವಿರುದ್ಧ ದೂರನ್ನು ದಾಖಲು ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಸ್ಯಾಂಡಲ್‌ವುಡ್‌ ನಟಿ ಖುದ್ದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Sponsored

ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿಯ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಗುರುವಾರ ನಟಿ ರಮ್ಯಾ ದೂರು ದಾಖಲಿಸಿದ್ದಾರೆ.

Advertisement
Advertisement

ದೂರು ಕೊಡುವ ಮುನ್ನ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರ ಜೊತೆ ಚರ್ಚಿಸಿದ ರಮ್ಯಾ, ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ನಟಿ ರಮ್ಯಾಗೆ ವ್ಯಕ್ತಿಯೊಬ್ಬ ನಿಂದಿಸಿದ್ದ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಮ್ಯಾ ದೂರು ನೀಡಿದ್ದರು. ಎಫ್‌ಐಆರ್ ದಾಖಲಾಗಿದ್ದು, ಸೆಂಟ್ರಲ್ ವಿಭಾಗದ ಸೈಬರ್ ಕ್ರೈಂ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Advertisement