Home Entertainment Kantara Chapter 1: ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್‌ ನೋಟಿಸ್

Kantara Chapter 1: ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್‌ ನೋಟಿಸ್

Kantara Prequel

Hindu neighbor gifts plot of land

Hindu neighbour gifts land to Muslim journalist

Kantara Chapter 1: ನಟ, ನಿರ್ದೇಶಕ ರಿಷಬ್‌ ಶೆಟ್ಟಿಯ ಕಾಂತಾರ: ಚಾಪ್ಟರ್‌ 1 ಚಿತ್ರತಂಡಕ್ಕೆ ಇನ್ನೊಂದು ತಡೆಯುಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಹಶೀಲ್ದಾರ್‌ ರಶ್ಮಿ ಅವರು ಕಾಂತಾರ ಚಿತ್ರತಂಡಕ್ಕೆ ನೋಟಿಸ್‌ ನೀಡಿದ್ದಾರೆ. ಮಾಣಿ ಡ್ಯಾಮ್‌ ಹಿನ್ನೀರಿನಲ್ಲಿ ದೋಣಿ ಮಗುಚಿ ಅವಘಡವೊಂದು ಇತ್ತೀಚೆಗೆ ಸಂಭವಿಸಿತ್ತು. ಈ ಕುರಿತು ಮಾಧ್ಯಮಗಳು ವರದಿ ಮಾಡಿತ್ತು. ಈ ಕುರಿತು ಸ್ಪಷ್ಟನೆ ನೀಡುವಂತೆ ಕಾಂತಾರ ಚಿತ್ರತಂಡಕ್ಕೆ ನೋಟಿಸ್‌ ನೀಡಲಾಗಿದೆ.

ಹಾಗೂ ಶೂಟಿಂಗ್‌ಗೆ ಪಡೆದ ಅನುಮತಿ ಪತ್ರ ಹಾಜರುಪಡಿಸಲು ಸೂಚಿಸಲಾಗಿದೆ. ನೋಟಿಸ್‌ ತಲುಪಿದ 3 ದಿನದೊಳಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್‌ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್ ನೀಡಿರುವ ನೋಟಿಸ್ ಈ ರೀತಿ ಇದೆ. ‘ದಿನಾಂಕ 15-06-2025ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತರ: ದಿ ಲೆಜೆಂಡ್ ಭಾಗ-ಒಂದು ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ ಹಾಗೆಯೇ ಒಂದು ಅಂಬುಲೆನ್ಸ್ ಚಿತ್ರೀಕರಣದ ಸ್ಥಳದಿಂದ ತೀರ್ಥಹಳ್ಳಿ ಕಡೆ ಹೋಗಿರುವ ಬಗ್ಗೆ ಪುಕಟವಾಗಿರುತ್ತದೆ. ಸದರಿ ಚಿತ್ರೀಕರಣ ನಡೆಯುತ್ತಿರುವ ಬಗ್ಗೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲ್ಲೂಕು ಆಡಳಿತಕ್ಕಾಗಲಿ, ಜಿಲ್ಲಾಡಳಿತಕ್ಕಾಗಲಿ ಯಾವುದೇ ಮಾಹಿತಿಯನ್ನು ತಾವು ನೀಡಿರುವುದಿಲ್ಲ.’

‘ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಸೃಷ್ಟಿಕರಣ ನೀಡಿರುವುದು ಸರಿಯಷ್ಟೇ. ಆದರೆ ಸದರಿ ಸುದ್ದಿಯಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದು, ಮಾನ್ಯ ಜಿಲ್ಲಾಧಿಕಾರಿಯವರು ಈ ಬಗ್ಗೆ ವರದಿ ಕೇಳಿದ್ದು, ರಾಜಸ್ವ ನಿರೀಕ್ಷಕರು, ನಗರ ಹೋಬಳಿ ರವರು ನಿಮ್ಮ ಸಂಸ್ಥೆಯ ಮ್ಯಾನೇಜರ್ ಅವರಿಗೆ ಅನುಮತಿ ಪತ್ರಗಳನ್ನು ಹಾಜರುಪಡಿಸಲು ದೂರವಾಣಿ ಮೂಲಕ ಸಂಪರ್ಕಿಸಿದ್ದರೂ ಸಹ ನೀವುಗಳು ಯಾವುದೇ ಸ್ಪಂದನೆ ನೀಡಿರುವುದಿಲ್ಲ.’

‘ದಿನಾಂಕ 15-06-2025ರಂದು ನಡೆದ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಅವಶ್ಯವಿರುವುದರಿಂದ ಸಮರ್ಪಕ ದಾಖಲೆಗಳೊಂದಿಗೆ ಈ ನೋಟೀಸ್ ತಲುಪಿದ 3 ದಿನಗಳ ಒಳಗಾಗಿ ಸಮಜಾಯಿಷಿ ನೀಡಲು ಸೂಚಿಸಿದೆ. ತಪ್ಪಿದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಭಾವಿಸಿ ಚಿತ್ರೀಕರಣಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ತಿಳಿಯಿರಿ’ ಎಂದು ನೋಟೀಸ್ ನೀಡಲಾಗಿದೆ.