ಶನಿವಾರ, 24 ಅಕ್ಟೋಬರ್ 2026

ನಟ ಕಮಲ್‌ ಹಾಸನ್‌ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಚಿತ್ರನಟ ಕಮಲ್ ಹಾಸನ್ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೂಪರ್‌ಸ್ಟಾರ್‌ ಕಮಲ್ ಹಾಸನ್ ಅವರಿಗೆ ಜ್ವರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ನಂತರ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಮಲ್ ಹಾಸನ್ ಅವರು ನವೆಂಬರ್ 23 ರಂದು ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ (SRMC) ದಾಖಲಾಗಿದ್ದರು. ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ. ನಟ ಕಮಲ್ ಹಾಸನ್ ಅವರು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಲ್ತ್ ಚೆಕಪ್‌ಗಾಗಿ ಕಮಲ್ ಆಸ್ಪತ್ರೆಗೆ ತೆರಳಿದ್ದರು ಎಂದು ಕೂಡ ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಅವರಿಗೆ ಜ್ವರ ಕೂಡ ಇತ್ತು, ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ